ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವತಿಯಿಂದ 2026ನೇ ಸಾಲಿನ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (NDA) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ದೇಶದ ರಕ್ಷಣಾ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶವಾಗಿದೆ. ಒಟ್ಟು 845 ಹುದ್ದೆಗಳ ನೇಮಕಾತಿ ನಡೆಯಲಿದ್ದು,ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನದ ಜೊತೆಗೆ ಕೇಂದ್ರ ಸರ್ಕಾರಿ ಸೌಲಭ್ಯಗಳು ದೊರೆಯಲಿವೆ.
ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ಮಾಡುವ ಅವಕಾಶ ಪಡೆಯಲಿದ್ದು, ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ, 12ನೇ ತರಗತಿ, ಪದವಿ ಅಥವಾ ಬಿಇ/ಬಿ.ಟೆಕ್ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
- ಸಂಸ್ಥೆ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
- ಹುದ್ದೆ: CDS & NDA
- ಒಟ್ಟು ಹುದ್ದೆಗಳು: 845
- ಕೆಲಸದ ಸ್ಥಳ: ಅಖಿಲ ಭಾರತ
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ, 12ನೇ, ಪದವಿ ಅಥವಾ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.
ವೇತನ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹56,100 ರಿಂದ ₹2,25,000ರವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ
01 ಆಗಸ್ಟ್ 2025ರ ಅನ್ವಯ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯಸ್ಸು 24 ವರ್ಷ ಇರಬೇಕು.
ಅರ್ಜಿ ಶುಲ್ಕ
CDS ಪರೀಕ್ಷೆಗೆ
- ಸಾಮಾನ್ಯ ಅಭ್ಯರ್ಥಿಗಳು: ₹200
- SC/ST ಅಭ್ಯರ್ಥಿಗಳು: ಶುಲ್ಕ ಇಲ್ಲ
NDA ಪರೀಕ್ಷೆಗೆ
- ಸಾಮಾನ್ಯ ಅಭ್ಯರ್ಥಿಗಳು: ₹100
- SC/ST ಅಭ್ಯರ್ಥಿಗಳು: ಶುಲ್ಕ ಇಲ್ಲ
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:
- ಪೂರ್ವಭಾವಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
- SSB ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ
ಮೊದಲು UPSC ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ ಅರ್ಜಿ ಶುಲ್ಕ ಪಾವತಿಸಿದ ನಂತರ ಅರ್ಜಿಯನ್ನು ಸಲ್ಲಿಸಬೇಕು. ಕೊನೆಯಲ್ಲಿ ಅರ್ಜಿಯ ಪ್ರಿಂಟ್ ಕಾಪಿಯನ್ನು ಉಳಿಸಿಕೊಳ್ಳುವುದು ಉತ್ತಮ.
ಪ್ರಮುಖ ದಿನಾಂಕಗಳು
- ಅರ್ಜಿ ಆರಂಭ ದಿನಾಂಕ: 20 ಮೇ 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಜೂನ್ 2026
ದೇಶ ಸೇವೆ ಮಾಡುವ ಕನಸು ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ತಕ್ಷಣವೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ